+91 80 2244 4033 ksccsfltd@gmail.com

Karnataka State Co-Op Credit Societies Federation Ltd.

ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿಯಮಿತ

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಮತ್ತು ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳದ ಸಂಯುಕ್ತಾಶ್ರಯದಲ್ಲಿ ದಿನಾಂಕ: 05-03-2019 ರಂದು ತುಮಕೂರಿನಲ್ಲಿ ನಡೆದ ಶಿಕ್ಷಣ ತರಬೇತಿ ಕಾರ್ಯಗಾರ

ತುಮಕೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಕರ್ನಾಟಕ ರಾಜ್ಯ ಪತ್ತಿನ ಸಹಕಾರ ಸಂಘಗಳ ಮಹಾಮಂಡಳ ನಿ., ಬೆಂಗಳೂರು, ತುಮಕೂರು ಜಿಲ್ಲಾ ಸಹಕಾರ ಯೂನಿಯನ್ ನಿ., ತುಮಕೂರು ಹಾಗೂ ಸಹಕಾರ ಇಲಾಖೆ, ತುಮಕೂರು ಇವರ ಸಹಯೋಗದಲ್ಲಿ ತುಮಕೂರು ಜಿಲ್ಲೆಯ ವ್ಯಾತ್ತಿಗೊಳಪಡುವ ಪತ್ತಿನ ಸಹಕಾರ ಸಂಘಗಳ ಮುಖ್ಯಕಾರ್ಯನಿರ್ವಹಣಾಧಿಕಾರಿಗಳಿಗೆ ಒಂದು ದಿನದ ರಾಜ್ಯ ಮಟ್ಟದ ವಿಶೇಷ ತರಬೇತಿ ಕಾರ್ಯಕ್ರಮವನ್ನು ದಿನಾಂಕ: 05-03-2019 ರಂದು ನಗರದ ಜಿಲ್ಲಾ ಸಹಕಾರ ಯೂನಿಯನ್ ಸಭಾಂಗಣದಲ್ಲಿ ಏರ್ಪಡಿಸಿಲಾಗಿತ್ತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಮತ್ತು ತುಮಕೂರು ಡಿ.ಸಿ.ಸಿ.ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಕೆ.ಎನ್.ರಾಜಣ್ಣನವರು ಸಹಕಾರಿ ಕ್ಷೇತ್ರದಲ್ಲಿ ದಕ್ಷತೆ ಮತ್ತು ಪ್ರಾಮಾಣಿಕತೆಗಳಿಂದಲೆ ಸಂಪೂರ್ಣ ಯಶಸ್ಸು ಸಾಧ್ಯ ಎಂದರು. ಸಹಕಾರ ಸಂಘದ ಸದಸ್ಯರುಗಳು ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರಾಮುಖ್ಯತೆ ನೀಡಿ ಉತ್ತಮ ಪ್ರಜೆಗಳನ್ನಾಗಿ ರೂಪಿಸಿಕೊಳ್ಳಲು ಶ್ರಮಿಸಬೇಕೆಂದು ಕರೆಯಿತ್ತರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷರಾದ ಶ್ರೀ ಎನ್. ಗಂಗಣ್ಣನವರು ಮಾತನಾಡಿ ಜಿಲ್ಲೆಯಲ್ಲಿ ತುಮಕೂರು ಡಿ.ಸಿ.ಸಿ.ಬ್ಯಾಂಕ್ ಶ್ರೀ ಕೆ.ಎನ್.ರಾಜಣ್ಣನವರ ಅಧ್ಯಕ್ಷತೆಯಲ್ಲಿ ರೈತಾಪಿ ಜನರಿಗೆ ಸಾಲ ಸೌಲಭ್ಯ ನೀಡುವ ಮೂಲಕ ರಾಜ್ಯದಲ್ಲಿಯೇ ಮಂಚೂಣಿಯಲ್ಲಿದೆ ಎಂದು ಹೇಳಿ ಪತ್ತಿನ ಸಹಕಾರ ಸಂಘಗಳು ತರಬೇತಿಯ ಪೂರ್ಣ ಪ್ರಯೋಜನವನ್ನು ಪಡೆಯಬೇಕೆಂದು ಸಲಹೆಮಾಡಿದರು.

ಕರ್ನಾಟಕ ರಾಜ್ಯ ಪತ್ತಿನ ಸಹಕಾರ ಸಂಘಗಳ ಮಹಾಮಂಡಳದ ಅಧ್ಯಕ್ಷರಾದ ಶ್ರೀ ಸಿ.ಎಂ. ಮಾರೇಗೌಡರು ಮಾತನಾಡಿ, ಬಾಗಲಕೋಟೆ ಮತ್ತು ಮಂಗಳೂರು ಡಿ.ಸಿ.ಸಿ.ಬ್ಯಾಂಕುಗಳು ಪತ್ತಿನ ಸಹಕಾರ ಸಂಘಗಳಿಗೆ ಸ್ವಂತ ಕಟ್ಟಡ ನಿರ್ಮಿಸಿಕೊಳ್ಳಲು ಹಣಕಾಸು ಸೌಲಭ್ಯವನ್ನು ಮತ್ತು ಅನುದಾನವನ್ನು ನೀಡುತ್ತಿದ್ದು, ಈ ವಿಷಯದಲ್ಲಿ ತುಮಕೂರು ಡಿ.ಸಿ.ಸಿ.ಬ್ಯಾಂಕಿನ ಅಧ್ಯಕ್ಷರು ಅನುಕೂಲ ಮಾಡಿಕೊಡುವಂತೆ ವಿನಂತಿ ಮಾಡಿದರು. ರಾಜ್ಯ ಪತ್ತಿನ ಸಂಘಗಳ ಮಹಾಮಂಡಳವು ಪತ್ತಿನ ಸಹಕಾರ ಸಂಘಗಳ ವ್ಯಾಜ್ಯಗಳನ್ನು ಇತ್ಯರ್ಥಪಡಿಸಲು ಪ್ರತ್ಯೇಕವಾಗಿ ನ್ಯಾಯಾಲಗಳನ್ನು ಸ್ಥಾಪಿಸಲು ಅನುಮತಿ ಪಡೆಯಲು ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದ್ದು ಶೀರ್ಘವಾಗಿ ಸರ್ಕಾರದಿಂದ ಮಂಜೂರಾತಿ ದೊರೆಯುವ ವಿಶ್ವಾಸ ವ್ಯಕ್ತಪಡಿಸಿದರು.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಉಪಾಧ್ಯಕ್ಷರಾದ ಶ್ರೀ ಎನ್. ಚಂದ್ರಪ್ಪನವರು ಮಾತನಾಡಿ, ಪತ್ತಿನ ಸಹಕಾರ ಸಂಘಗಳಿಗೆ ಪ್ರತ್ಯೇಕವಾದ ನ್ಯಾಯಾಲಯದ ರಚನೆಯಾಗಬೇಕು ಮತ್ತು ಪತ್ತಿನ ಸಹಕಾರ ಸಂಘಗಳು ಸ್ಪರ್ಧಾತ್ಮಕವಾಗಿ ಹಾಗೂ ವೃತ್ತಿಪರತೆಯಿಂದ ಕಾರ್ಯನಿರ್ವಹಿಸಬೇಕೆಂದು ತಿಳಿಸಿದರು.

ತುಮಕೂರು ಲೋಕಸಭಾ ಸದಸ್ಯರಾದ ಶ್ರೀ ಎಸ್.ಪಿ. ಮುದ್ದಹನುಮೇಗೌಡರವರು ಮಾತನಾಡಿ ಜಿಲ್ಲೆಯ ಮಹಿಳಾ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಶ್ರೀಮತಿ ಅನ್ನಪೂರ್ಣನಂಜಪ್ಪನವರಿಗೆ ಸಹಕಾರ ರತ್ನ ಪ್ರಶಸ್ತಿ ಲಭಿಸಿರುವುದು ನಿಜಕ್ಕೂ ಅಭಿನಂದನೀಯವಾದುದು ಎಂದು ಹೇಳಿ ಜಿಲ್ಲೆಯ ಸಹಕಾರಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಜಿಲ್ಲೆಯ ಸಹಕಾರಿಗಳ ಶ್ರಮ ಹಾಗೂ ನಿಷ್ಠೆ ಅಡಗಿದೆ. ಅದರಲ್ಲೂ ಶ್ರೀ ಕೆ.ಎನ್.ರಾಜಣ್ಣನವರ ದೂರದರ್ಶಿತ್ವ ಮತ್ತು ರೈತಪರ ಮತ್ತು ಬಡವರಪರ ಯೋಜನೆಗಳು ಮಾಧರಿಯಾಗಿವೆ ಎಂದು ಹೇಳಿದರು.

ಕಾರ್ಯಕ್ರಮದ ಉಪನ್ಯಾಸಕರಾಗಿ ಸನ್ನದು ಲೆಕ್ಕಪರಿಶೋಧಕರಾದ ಶ್ರೀ ಅನಿಲ್ ಭಾರಧ್ವಾಜ್, ಬೆಂಗಳೂರು ಮತ್ತು ಶ್ರೀ ಹೆಚ್.ಎಸ್. ನಾಗರಾಜಯ್ಯ ಸಹಕಾರ ಸಂಘಗಳ ಅಪರ ನಿಬಂಧಕರು, (ನಿವೃತ್ತಿ), ಬೆಂಗಳೂರು ಇವರುಗಳು ಪತ್ತಿನ ಸಹಕಾರ ಸಂಘಗಳಲ್ಲಿ ಜಿ.ಎಸ್.ಟಿ. ಮಹತ್ವ, ಆದಾಯ ತೆರಿಗೆ ಪಾವತಿ ನಿಯಮದ ಮಹತ್ವದ ಬಗ್ಗೆ ಹಾಗೂ ಪತ್ತಿನ ಸಹಕಾರ ಸಂಘಗಳ ಕಾನೂನಿನ ಮುಖ್ಯಾಂಶಗಳು ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿಯ ಕರ್ತವ್ಯ, ಜವಾಬ್ದಾರಿ. ಹಾಗೂ ಸಹಕಾರ ಸಂಘಗಳಲ್ಲಿ ಚುನಾವಣೆ ನಡೆಸುವ ವಿಧಾನದ ಮಹತ್ವದ ಕುರಿತು ಉಪನ್ಯಾಸ ನೀಡಿದರು.

ಕಾರ್ಯಕ್ರಮದ ಪ್ರಾರಂಭದಲ್ಲಿ ಜಿಲ್ಲಾ ಸಹಕಾರ ಯೂನಿಯನ್‍ನ ಅಧ್ಯಕ್ಷರಾದ ಶ್ರೀ ಬಿ.ಜಿ.ವೆಂಕಟೇಗೌಡರು ಎಲ್ಲರನ್ನು ಸ್ವಾಗತಿಸಿದರು. ವೇದಿಕೆಯಲ್ಲಿ ಪತ್ತಿನ ಸಹಕಾರ ಮಹಾಮಂಡಳದ ನಿರ್ದೇಶಕರಾದ ಶ್ರೀ ಜಿ. ಮಲ್ಲಿಕಾರ್ಜುನಯ್ಯ, ಪತ್ತಿನ ಮಹಾಮಂಡಳದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಪಿ. ಆಶಾಲತಾ, ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕರಾದ ಶ್ರೀ ಜಿ.ಡಿ. ಸುರೇಶ್‍ಗೌಡ, ಶ್ರೀ ಎಸ್. ಲಕ್ಷ್ಮೀನಾರಾಯಣ, ಡಿಸಿ.ಸಿ.ಬ್ಯಾಂಕಿನ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀ ಜಿ. ಪ್ರಕಾಶ್, ಸಹಕಾರ ಸಂಘಗಳ ಉಪನಿಬಂಧಕರಾದ ಶ್ರೀ ಆರ್.ಜೆ. ಕಾಂತರಾಜು, ಜಿಲ್ಲಾ ಯೂನಿಯನ್‍ನ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀ ಡಿ. ಮಹದೇವಯ್ಯ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Back To Top